ಲಾಕ್ ಡೌನ್ ನಿಂದ ಆರ್ಥಿಕತೆ ಇಳಿತ: ಎಫ್ಕೆಸಿಸಿಐ ಅಧ್ಯಕ್ಷ ಜನಾರ್ದನ ಆತಂಕ

Prasthutha|

ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಫೋಷಿಸಿದ್ದು, ಇದರ ಕಾರಣದಿಂದ ಕೈಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರಗಳಲ್ಲಿ ಮತ್ತಷ್ಟು ಆರ್ಥಿಕ ಕುಸಿತ ಕಾಣಲಿದೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಜನಾರ್ಧನ ಅಸಮಾಧಾನ ವ್ಯಕ್ತಪಡಿಸಿರುವುದು ವರದಿಯಾಗಿದೆ.

- Advertisement -

 ‘‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯದಲ್ಲಿ 54 ದಿನಗಳ ಲಾಕ್‌ಡೌನ್ ಮುಗಿದ ನಂತರ ಮತ್ತೆ ಯಾವುದೇ ಕಾರಣಕ್ಕೂ ಲಾಕ್‌ಡೌನ್ ಜಾರಿ ಮಾಡಲ್ಲ ಎಂದು ಭರವಸೆ ನೀಡಿದ್ದರು. ಆದರೆ, ಪುನಃ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸುವ ಮೂಲಕ ಕೈಗಾರಿಕೆ, ಉದ್ಯಮ ಕ್ಷೇತ್ರ ನಶಿಸುವಂತೆ ಹಾಗೂ ಕಾರ್ಮಿಕರು ಬೀದಿ ಪಾಲಾಗುವಂತೆ ಮಾಡಿದ್ದಾರೆ’’ ಎಂದು ಮಾಧ್ಯಮಕ್ಕೆ ಆತಂಕ ವ್ಯಕ್ತಪಡಿಸಿದಾರೆ.

 ‘‘ಕೈಗಾರಿಕೆಗಳಲ್ಲಿ ಕೋವಿಡ್ ಸೋಂಕು ಹರಡದಂತೆ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೈಗಾರಿಕೆ ಕ್ಷೇತ್ರದಲ್ಲಿ ಯಾವುದೇ ಸೋಂಕು ಕಂಡು ಬಂದಿಲ್ಲ. ಅಲ್ಲದೆ, ಕೈಗಾರಿಕಾ ವಲಯ ರಾಜ್ಯದ ಜಿಎಸ್‌ಡಿಪಿಗೆ ಸುಮಾರು ಶೇ.26ರಷ್ಟು ಕೊಡುಗೆ ನೀಡಿದೆ. ಕೈಗಾರಿಕೆಗಳು ಹಾಗೂ ಉದ್ಯಮ ಮುಚ್ಚಿದರೆ, ಉದ್ಯೋಗ ನಷ್ಟಕ್ಕೆ ಕಾರಣವಾಗಿ ಜಿಎಸ್‌ಟಿ ಸಂಗ್ರಹಕ್ಕೆ ಧಕ್ಕೆ ತರಲಿದೆ’’ ಎಂದು ಅವರು ಹೇಳಿದ್ದಾರೆ.

Join Whatsapp