Home ರಾಜ್ಯ ವಿಕ್ಟೋರಿಯಾ ಆಸ್ಪತ್ರೆಯಿಂದ ವಿ.ಕೆ.ಶಶಿಕಲಾ ಬಿಡುಗಡೆ

ವಿಕ್ಟೋರಿಯಾ ಆಸ್ಪತ್ರೆಯಿಂದ ವಿ.ಕೆ.ಶಶಿಕಲಾ ಬಿಡುಗಡೆ

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದರೂ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಇಂದು ಬೆಳಿಗ್ಗೆ ಬಿಡುಗಡೆಯಾಗಿದ್ದಾರೆ.
ಕಳೆದ ಜ.27ರಂದು ಜೈಲಿನಿಂದ ಬಿಡುಗಡೆಗೆ ಆದೇಶ ಹೊರಡಿಸಲಾಗಿತ್ತು. ಆದರೆ ಜೈಲಿನಲ್ಲಿದ್ದ ವೇಳೆ ಶಶಿಕಲಾ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಜ.20 ರಂದು ಬೌರಿಂಗ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಬಳಿಕ ಸಿಟಿ ಸ್ಕ್ಯಾನ್ಗೆಂದು ವಿಕ್ಟೋರಿಯಾಗೆ ಸ್ಥಳಾಂತರ ಮಾಡಲಾಗಿತ್ತು. ಮರುದಿನ ಶಶಿಕಲಾ ಗಂಟಲು ದ್ರವ ಮಾದರಿ ಪರೀಕ್ಷೆ ವೇಳೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಇದರಿಂದಾಗಿ ಜ. 27ರಂದು ಜೈಲಿನಿಂದ ಬಿಡುಗಡೆಯಾದರೂ ಆಸ್ಪತ್ರೆಯಲ್ಲಿ ಉಳಿಯಬೇಕಾಯಿತು.
ಚಿಕಿತ್ಸೆ ಪೂರ್ಣಗೊಂಡಿರುವುದರಿಂದ ಇಂದು ಆಸ್ಪತ್ರೆಯಿಂದ ಶಶಿಕಲಾ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲಿಂದ ಅವರು ನೇರವಾಗಿ ಬೆಂಗಳೂರಿನ ಹೊರವಲಯದ ಆನೇಕಲ್ ಬಳಿಯಲ್ಲಿ ಆಪ್ತರೊಬ್ಬರ ಮನೆಯಲ್ಲಿ ಶಶಿಕಲಾ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 11ರ ನಂತರ ಅವರು ತಮಿಳುನಾಡಿಗೆ ತೆರಳಲಿದ್ದಾರೆ. ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲೇ ಶಶಿಕಲಾ ತಮಿಳುನಾಡಿಗೆ ಪ್ರವೇಶಿಸುತ್ತಿರುವುದರಿಂದ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
ಬಿಡುಗಡೆ ವೇಳೆ ಆಸ್ಪತ್ರೆ ಸುತ್ತಲೂ 300ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಶಶಿಕಲಾ ಭಾವಚಿತ್ರವಿರುವ ಬ್ಯಾನರ್, ಪೋಸ್ಟರ್ ಹಿಡಿದು ಜೈಕಾರ ಹಾಕಿ ಸಿಹಿಹಂಚಿ ಸಂಭ್ರಮಿಸಿದರು.

Join Whatsapp
Exit mobile version