ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣಗೆ ಕುಟುಂಬಸ್ಥರ ಒತ್ತಡ

Prasthutha|

ಬೆಂಗಳೂರು: ಮಾಡಬಾರದ್ದನ್ನು ಮಾಡಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್​‌ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಭಾನುವಾರ ದುಬೈಯಿಂದ ಬೆಂಗಳೂರಿಗೆ ಬರುತ್ತಾರೆಂದು ಸುದ್ದಿಯಾಗಿದ್ದರೂ ಪ್ರಜ್ವಲ್ ಬಂದಿಲ್ಲ.

ವಿಡಿಯೋ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಈ ವೇಳೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ಇರುವುದು ಕುಟುಂಬ ಮತ್ತು ಪಕ್ಷಕ್ಕೆ ಮತ್ತಷ್ಟು ಮುಜುಗರವನ್ನು ಉಂಟುಮಾಡುತ್ತದೆ. ಮೊದಲು ಎಸ್​​ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸು. ನಂತರ ಕಾನೂನು ಹೋರಾಟದಿಂದ ಪ್ರಕರಣದ ಸತ್ಯಾಂಶ ಹೊರಬರುತ್ತದೆ. ವಿಚಾರಣೆಗೆ ಹಾಜರಾಗದೆ ಕಾನೂನು ಹೋರಾಟಕ್ಕೆ ಮೊರೆ ಹೋದರೆ ಮತ್ತಷ್ಟು ಸಮಸ್ಯೆ ಆಗುತ್ತದೆ. ಈಗಾಗಲೇ ಈ ಪ್ರಕರಣದಿಂದ ಸಾಕಷ್ಟು ಡ್ಯಾಮೇಜ್ ಆಗುತ್ತಿದೆ. ಹೀಗಾಗಿ ಕೂಡಲೇ ವಕೀಲರ ಜೊತೆ ಸಮಾಲೋಚನೆ ನಡೆಸಿ ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು ಪ್ರಜ್ವಲ್ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

- Advertisement -

ಎಸ್‌ಐಟಿ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಕೂಡಲೇ ಪ್ರಜ್ವಲ್ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್, ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ. ನ್ಯಾಯಯುತ ತನಿಖೆಗಾಗಿ ಎಸ್‌ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ ಎಂದಿದ್ದಾರೆ.

Join Whatsapp