Home ಟಾಪ್ ಸುದ್ದಿಗಳು ಬಿಸಿಲಿನ ತೀವ್ರತೆ: ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ಬಿಸಿಲಿನ ತೀವ್ರತೆ: ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ವಿಟ್ಲ: ಬಿಸಿಲಿನ ತೀವ್ರತೆಯಿಂದಾಗಿ ಚಲಿಸುತ್ತಿದ್ದ ಬಸ್ಸಿನ ಗಾಜು ಇದ್ದಕ್ಕಿಂದ್ದಂತೆ ಒಡೆದ ಘಟನೆ ವಿಟ್ಲದ ಉರಿಮಜಲು ಎಂಬಲ್ಲಿ ನಡೆದಿದೆ. ಕೇರಳ ರಾಜ್ಯ ಸಾರಿಗೆ ಬಸ್ಸಿನ ಗಾಜು ಒಡೆದಿದ್ದು, ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡಿದ್ದಾರೆ.

ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ. ಬಾಲಕನೋರ್ವ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬಸ್ ಸ್ಥಳದಲ್ಲಿಯೇ ನಿಂತಿದೆ. ಪ್ರಯಾಣಿಕರನ್ನು ಬೇರೆ ಬಸ್ಸಿನಲ್ಲಿ ಕಳುಹಿಸಲಾಗಿದೆ.

Join Whatsapp
Exit mobile version