ವಿರೋಧದ ನಡುವೆ NEET, JEE ಪರೀಕ್ಷೆಯ ಅಂತಿಮ ದಿನಾಂಕ ಪ್ರಕಟ

Prasthutha|

ನವದೆಹಲಿ : ಎನ್ ಇಇಟಿ (ನೀಟ್) ಮತ್ತು ಜೆಇಇ ಪರೀಕ್ಷೆಗಳ ಬಗ್ಗೆ ಸಾಕಷ್ಟು ವಿವಾದಗಳ ಬಳಿಕ, ಇದೀಗ ಪರೀಕ್ಷೆಯ ದಿನಾಂಕ ಅಂತಿಮಗೊಂಡಿದೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೊಖ್ರಿಯಾಲ್ ನಿಶಾಂಕ್ ಬುಧವಾರ ಹೇಳಿಕೆ ನೀಡಿದ್ದು, ಸುಪ್ರೀಂ ಕೋರ್ಟ್ ಆದೇಶ ಹಾಗೂ ಪ್ರಸ್ತುತ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯ ದಿನಾಂಕ ಅಂತಿಮಗೊಳಿಸಲಾಗಿದೆ. ಎರಡು ಬಾರಿ ಮುಂದೂಡಲ್ಪಟ್ಟ ಬಳಿಕ, ಈ ನಿರ್ಧಾರ ಕೈಗೊಳ್ಳಲಾಗಿದೆ. ಪರೀಕ್ಷೆಗೆ ಹಾಜರಾಗುತ್ತಿರುವ ಶೇ.85 ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಈಗಾಗಲೇ ಪಡೆದಿದ್ದಾರೆ. ಸಾಕಷ್ಟು ತಯಾರಿಯ ಬಳಿಕ, ಅವರು ಪರೀಕ್ಷೆಗೆ ಹಾಜರಾಗಲು ಸಿದ್ಧರಾಗಿದ್ದಾರೆ. ಈ ಬಾರಿ ನಿರ್ಧರಿಸಿದ ದಿನಾಂಕದಲ್ಲಿ ಪರೀಕ್ಷೆ ನಡೆಯುವುದು ಖಚಿತ ಎಂದು ಅವರು ತಿಳಿಸಿದ್ದಾರೆ.

- Advertisement -

ವಿದ್ಯಾರ್ಥಿಗಳು ಮತ್ತು ಹೆತ್ತವರು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸಲು ನಿರಂತರ ಒತ್ತಡ ಹೇರಿದ್ದಾರೆ. ಎಲ್ಲಿ ವರೆಗೆ ನಾವು ಅಧ್ಯಯನ ನಡೆಸುತ್ತಲೇ ಇರಬೇಕು ಎಂದು ಅವರು ಕೇಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಸುಮಾರು 7.25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ, ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆಯೂ ಒತ್ತಡ ಕೇಳಿಬರುತ್ತಿದೆ. ಆದರೆ, ಪರೀಕ್ಷೆ ನಿಗದಿ ಪಡಿಸಿದಂತೆ ನಡೆಯುತ್ತದೆ ಎಂದು ಮಂಗಳವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿತ್ತು. ಜೆಇಇ ಮುಖ್ಯಪರೀಕ್ಷೆ ಸೆ.1ರಿಂದ 6ರ ವರೆಗೆ ಮತ್ತು ನೀಟ್ ಪರೀಕ್ಷೆ ಸೆ.13ರಂದು ನಡೆಯಲಿದೆ ಎಂದು ಹೇಳಲಾಗಿದೆ.

ಪರೀಕ್ಷೆ ಮುಂದೂಡಿಕೆಗೆ ಒತ್ತಾಯ | ಸಿಎಂಗಳ ಸಭೆಗೆ ಸಿದ್ಧತೆ :
ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸುವ ಸಲುವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಸಂಜೆ ಬಿಜೆಪಿಯೇತರ ಪಕ್ಷಗಳ ಆಳ್ವಿಕೆ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್, ಪುದುಚೇರಿ ಸಿಎಂ ವಿ.ನಾರಾಯಣ ಸ್ವಾಮಿ ಮತ್ತಿತರರು ಈ ಸಭೆಯಲ್ಲಿ ಭಾಗವಹಿಸುವುದನ್ನು ದೃಢ ಪಡಿಸಿದ್ದಾರೆ.

- Advertisement -

ಪರೀಕ್ಷೆ ಮುಂದೂಡಿ ಚಳವಳಿಗೆ ಗ್ರೆಟಾ ತನ್ ಬರ್ಗ್ ಬೆಂಬಲ :
ಜೆಇಇ, ನೀಟ್ ಪರೀಕ್ಷೆಗಳನ್ನು ಮುಂದೂಡಿ ಎಂಬ ರಾಷ್ಟ್ರವ್ಯಾಪಿ ಚಳವಳಿಗೆ ಯುವ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೆಟಾ ತನ್ ಬರ್ಗ್ ಬೆಂಬಲ ಸೂಚಿಸಿದ್ದಾರೆ. ಕೋವಿಡ್ 19 ಸೋಂಕು ಮತ್ತು ಭೀಕರ ಪ್ರವಾಹಗಳಿಂದ ದೇಶ ತತ್ತರಿಸುವಾಗ ಈ ಪರೀಕ್ಷೆಗಳನ್ನು ನಡೆಸುವುದು ವಿದ್ಯಾರ್ಥಿಗಳಿಗೆ ಬಗೆಯುವ ಘೋರ ಅನ್ಯಾಯ ಎಂದು ಅವರು ಹೇಳಿದ್ದಾರೆ.

“ಕೋವಿಡ್ -19 ಅವಧಿಯಲ್ಲಿ ಜೆಇಇ-ನೀಟ್ ಪರೀಕ್ಷೆಗಳನ್ನು ನಡೆಸುವುದನ್ನು ಮುಂದೂಡಿ ಎಂಬುದಾಗಿ ಭಾರತದಲ್ಲಿ ನಡೆಯುತ್ತಿರುವ ಚಳವಳಿಗೆ ನಾನು ಬೆಂಬಲ ಸೂಚಿಸುತ್ತೇನೆ ಎಂದು ತನ್ ಬರ್ಗ್ ಟ್ವೀಟ್ ಮಾಡಿದ್ದಾರೆ.

Join Whatsapp