Home ಟಾಪ್ ಸುದ್ದಿಗಳು ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ

ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ

ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್ ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.


ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದಿದ್ದರು.


ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಲೋಕಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರೆ, ತಾಯಿ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದಾರೆ.

Join Whatsapp
Exit mobile version