ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಫೆಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ.
ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಫೆಲೆಸ್ತೀನ್ ಪರ ತಮ್ಮ ಬೆಂಬಲವನ್ನು ಸೂಚಿಸುವುದರ ಸಂಕೇತವಾಗಿ ಈ ಬ್ಯಾಗ್ ಹಿಡಿದುಕೊಂಡಿದ್ದಾರೆ ಎಂದು ಎಕ್ಸ್ ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.