ಕಾಂಗ್ರೆಸ್ ನಾಯಕ ಶಬ್ಬೀರ್ ಅಲಿ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ವಿಫಲವಾಗಿರುವ ಆಲ್ ಇಂಡಿಯಾ ಮಜ್ಲಿಸೆ-ಇತ್ತಿಹಾದುಲ್ ಮುಸ್ಲಿಮೀನ್ –ಎಐಎಂಐಎಂ ಅಧ್ಯಕ್ಷ ಹಾಗೂ ಸಂಸದ ಅಸದುದ್ದೀನ್ ಉವೈಸಿ ವಿರುದ್ಧ ಹೈದರಾಬಾದ್ ನ ವಿಶೇಷ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋಪಾಲಿಟನ್ ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ವಾರಂಟ್ ಹೊರಡಿಸಿದ್ದಾರೆ.
2016 ರಲ್ಲಿ, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್-ಜಿಎಚ್‌ಎಂಸಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಕಾಂಗ್ರೆಸ್ ಹಿರಿಯ ನಾಯಕರಾದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಶಬ್ಬೀರ್ ಅಲಿ ಅವರು ತೆರಳುತ್ತಿದ್ದ ಕಾರನ್ನು ತಡೆದು ಹಲ್ಲೆ ನಡೆಸಲಾಗಿತ್ತು.
ಮಿರ್ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ದೋಷಾರೋಪ ಪಟ್ಟಿಯಲ್ಲಿ ಪೊಲೀಸರು ಉವೈಸಿ ಅವರನ್ನು ಮುಖ್ಯ ಆರೋಪಿ ಎಂದು ಹೆಸರಿಸಿದ್ದರು. ಐದು ವರ್ಷಗಳಿಂದ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಆದರೆ, ಈ ದಾಳಿಯಲ್ಲಿ ಭಾಗಿಯಾಗಿರುವುದನ್ನು ಅಸದುದ್ದೀನ್ ನಿರಾಕರಿಸಿದ್ದಾರೆ.