ಬಂಟ್ವಾಳ: ಸಜೀಪ ನಡು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ 15 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಸತತ ಎರಡನೆ ಬಾರಿಗೆ ಪಕ್ಷ ಅಧಿಕಾರವನ್ನು ಹಿಡಿಯಲಿದೆ.
ಉಳಿದಂತೆ ನಾಲ್ಕು ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.
ಕಳೆದ ಬಾರಿ 7 ಸ್ಥಾನಗಳೊಂದಿಗೆ ಎಸ್.ಡಿ.ಪಿ.ಐ ಅಧಿಕಾರ ಹಿಡಿದಿತ್ತು.