ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರಿಬ್ಬರು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಕರ್ಮಕಾಂಡ ಬಯಲಿಗೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ರವರ ಹುಡುಗರಲ್ಲೇ 500 ಕೋಟಿ ರೂ. ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆಯಾಗಿ ಸತ್ಯಾಸತ್ಯತೆ ಹೊರ ಬರಲಿ ಎಂದು ಒತ್ತಾಯಿಸಿದರು.
ಇದು ರಾಜಕೀಯ ಪ್ರೇರಿತವಾಗಿದೆ. ಇಲ್ಲದಿದ್ದಲ್ಲಿ ಈ ರೀತಿಯ ಮಾತುಕತೆಗಳು ಕಾಂಗ್ರೆಸ್ ಕಚೇರಿಯಲ್ಲಿ ಕೇಳಿ ಬರುತ್ತಿರಲಿಲ್ಲ. ಇದರ ಹಿಂದೆ ಡಿಕೆಶಿಯನ್ನು ಮುಗಿಸುವ ತಂತ್ರಗಾರಿಕೆ ಇದೆ. ಡಿಕೆಶಿ ಪ್ರಭಾವ ಕುಗ್ಗಿಸಲು ಸಿದ್ದರಾಮಯ್ಯ ಮಾಡಿರುವ ತಂತ್ರಗಾರಿಕೆ ಇರಬಹುದು ಎಂದು ಹೇಳಿದ್ದಾರೆ.