ಹುಬ್ಬಳ್ಳಿ: ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ, ಸಿಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ, ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ಹೇಳಿದರು.
ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರಕ್ಕೆ ಮಾತನಾಡಿ, ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಾರೆ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ, ಅಲ್ಲಿಯ ಸಾಧಕ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು, ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು, ಆದ್ರೆ ತನಿಖೆಯನ್ನ ಸರಿಯಾಗಿ ಮಾಡಬೇಕಾಗುತ್ತೆ, ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ, ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ, ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ, ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಹೇಳಿದರು.