ಸೋತವರಿಗೆ ಹಾಗೂ ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಪಕ್ಷದ ವರಿಷ್ಠರ ಜೊತೆ ಮತ್ತೆ ಕೂಲಂಕಷವಾಗಿ ಚಚಿ೯ಸುತ್ತೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.
ಸಚಿವ ಸ್ಥಾನ ಸಿಗಲಿಲ್ಲವೆಂದು ಸಹಜವಾಗಿ ಆಘಾತವಾಗಿದೆ. ನಾಯಕತ್ವ ಮತ್ತು ಪಕ್ಷದ ಮೇಲೆ ಹೆಚ್ಚು ವಿಶ್ವಾಸವಿಟ್ಟಿದ್ದೇನೆ, ಮಂದೆಯು ಇಡುತ್ತೇನೆ, ನನ್ನ ಹೋರಾಟ ಪಕ್ಷ ಮತ್ತು ನಾಯಕತ್ವದ ವಿರುದ್ಧವಲ್ಲ. ಈಗ ಸರ್ಕಾರದಲ್ಲಾಗಿರುವ ತಪ್ಪು ವ್ಯವಸ್ಥೆ ವಿರುದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಗೆದ್ದ ಶಾಸಕರಿಗೆ ಮತದಾನ ಮಾಡಿದ ಮತದಾರರಿಗೆ ಮಾಡಿದ ಅವಮಾನವಿದು ಎಂದು ತಿಳಿಸಿದರು.
ಜಾತಿ ರಾಜಕೀಯ ಮಾಡಿ ನನಗೆ ಅಭ್ಯಾಸವಿಲ್ಲ. ಸೋತವರಿಗೆ ಸಚಿವ ಸ್ಥಾನ ನೀಡಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಸವ೯ ಜನಾಂಗದ ಮತದಾರರಿಗೆ ಮಾಡಿದ ಅಪಮಾನ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ಧಿಯೆ ನನ್ನ ಧ್ಯೇಯ. ಕನಾ೯ಟಕ ಸರ್ಕಾರ ಕೇವಲ 2 ಜಿಲ್ಲೆಗೆ ಮಾತ್ರ ಸೀಮಿತವಾಗಬಾರದು, ನಾಯಕತ್ವ ಮತ್ತು ಸಂಘಟನೆ ನನಗೆ ಎಲ್ಲಾ ಸ್ಥಾನ-ಮಾನ ನೀಡಿದೆ ಎಂದು ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.
ಸೋತವರಿಗೆ ಸಚಿವ ಸ್ಥಾನ ನೀಡುವ ಮೂಲಕ ಮತದಾರರಿಗೆ ಅವಮಾನ; ರೇಣುಕಾಚಾರ್ಯ
Prasthutha|