ಹಲ್ಲೆ ಪ್ರಕರಣ: ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Prasthutha|

ಬೆಂಗಳೂರು: ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಅವರ ಮೇಲೆ ಮಸಿ ಎರಚಿ ಹಲ್ಲೆ ಮಾಡಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಇದೀಗ ಟಿಕಾಯತ್ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.

- Advertisement -


‘ನಗರದ ಗಾಂಧಿಭವನದಲ್ಲಿ ಟಿಕಾಯತ್ ಮೇಲೆ ಮಸಿ ಎರಚಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿ ಎಚ್.ಆರ್. ಶಿವಕುಮಾರ್, ಘಟನೆ ಬಗ್ಗೆ ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಚಿಸಿದೆ.


‘ಶಿವಕುಮಾರ್ ಅವರಿಂದ ದೂರು ಸ್ವೀಕರಿಸಿ ರಾಕೇಶ್ ಟಿಕಾಯತ್, ಯುದ್ಧವೀರ ಸಿಂಗ್, ಬಿ. ಅನುಸೂಯಮ್ಮ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

- Advertisement -


‘ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಳಿಬಂದಿದ್ದ ಭ್ರಷ್ಟಾಚಾರ ಆರೋಪದ ಬಗ್ಗೆ ಚರ್ಚಿಸುವ ಸಲುವಾಗಿ ‘ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ ನೇತೃತ್ವದಲ್ಲಿ ರೈತ ಮುಖಂಡರು 2022ರ ಮೇ 30ರಂದು ನಡೆಸಿದ್ದ ‘ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆಯಲ್ಲಿ ರಾಕೇಶ್ ಟಿಕಾಯತ್ ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಅನುಸೂಯಮ್ಮ ತೆಲುಗಿನಲ್ಲಿ ಮಾತನಾಡಿದ್ದನ್ನು ಪ್ರಶ್ನಿಸಿದ್ದ ದೂರುದಾರ ಶಿವಕುಮಾರ್, ಕನ್ನಡದಲ್ಲಿ ಮಾತನಾಡಲು ಒತ್ತಾಯಿಸಿದ್ದರು. ಆದರೂ ಅನುಸೂಯಮ್ಮ ತೆಲುಗಿನಲ್ಲೇ ಭಾಷಣ ಮುಂದುವರಿಸಿದ್ದರಿಂದ ವೇದಿಕೆ ಏರಿ ಮೈಕ್ ಕಸಿಯಲು ಮುಂದಾದ ವೇಳೆ ವೇದಿಕೆಯಲ್ಲಿದ್ದವರು ಕುರ್ಚಿಗಳನ್ನು ಎತ್ತಿ ಹೊಡೆದಿದ್ದರಿಂದ ಗಾಯಗಳಾಗಿವೆ ಎಂದು ದೂರುದಾರ ಶಿವಕುಮಾರ್ ಆರೋಪಿಸಿದ್ದಾರೆ’

Join Whatsapp