ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಮ್ ಗೌಡ ವಿರುದ್ಧ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆಲುವು ಸಾಧಿಸಿದ್ದಾರೆ.
ಭಾರೀ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಸ್ಥಳೀಯ ನಾಯಕ ಸ್ವರೂಪ್ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಆ ಕ್ಷೇತ್ರದಲ್ಲಿ ತಮ್ಮ ಪತ್ನಿ ಭವಾನಿ ರೇವಣ್ಣ ಅವರಿಗೇ ಟಿಕೆಟ್ ಕೊಡಿಸಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನಡೆಸಿದ ಪ್ರಯತ್ನವೆಲ್ಲಾ ವಿಫಲವಾಗಿತ್ತು.