ಹಾಸನ ಪೆನ್ ಡ್ರೈವ್ ವಿಚಾರ: ಸಿಎಂಗೆ ಪತ್ರ ಬರೆದ ಮಹಿಳಾ ಆಯೋಗ

Prasthutha|

ಬೆಂಗಳೂರು: ಹಾಸನದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್ ಹಗರಣ ರಾಜ್ಯದಲ್ಲಿ ಗಮನ ಸೆಳೆಯುತ್ತಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ಹೆಣ್ಣುಮಕ್ಕಳ ಜೊತೆ ಲೈಂಗಿಕ ಚಟುವಟಿಕೆ ನಡೆಸುವುದರ ಜೊತೆಗೆ ಅದನ್ನು ಚಿತ್ರೀಕರಿಸಿಕೊಂಡ ವ್ಯಕ್ತಿ ಮತ್ತು ಈ ವಿಡಿಯೋಗಳನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ವಿಚಾರಣೆ ನಡೆಸುವ ಸಲುವಾಗಿ ವಿಶೇಷ ತಂಡವನ್ನು ರಚಿಸಬೇಕೆಂದು ಕೋರಿದೆ.

- Advertisement -

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಇಂದು ಪತ್ರ ಬರೆದಿದ್ದು, ಹಾಸನದಲ್ಲಿ ನಡೆಯುತ್ತಿರುವ ಆತಂಕಕಾರಿ ಘಟನೆಗಳ ಕುರಿತು ತನಿಖೆಯ ಅಗತ್ಯವನ್ನು ಹೇಳಿದ್ದಾರೆ.

ಪ್ರಭಾವಿ ರಾಜಕಾರಣಿಯೋರ್ವ ಅನೇಕ ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದ ಎನ್ನಲಾಗುತ್ತಿದೆ. ಅಶ್ಲೀಲ ದೃಶ್ಯಗಳು ಇರುವ ಪೆನ್ ಡ್ರೈವ್ ಗಳು ಹಾಸನ ನಗರದ ಜನತೆಯ ಕೈಗೆ ಸಿಕ್ಕಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

- Advertisement -

ಮಹಿಳಾ ಆಯೋಗಕ್ಕೂ ಈಗಾಗಲೇ ಹಲವು ದೂರುಗಳು ಬಂದಿದೆ. ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗಿದೆ.

ಈಹಿನ್ನೆಲೆಯಲ್ಲಿ ಸರಕಾರಕ್ಕೆ ಪತ್ರ ಬರೆದಿರುವ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ವಿಶೇಷ ತನಿಖಾ ತಂಡವೊಂದನ್ನು ರಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿ ಕರೆದಿದ್ದ ಮಹಿಳಾ ಆಯೋಗದ ಅಧ್ಯಕ್ಷೆ, ಹರಿದಾಡುತ್ತಿರುವ ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಕುರಿತು ಮತ್ತು ಸಾವಿರಾರು ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು. ಮೊಬೈಲ್‌ನಲ್ಲಿ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿಕೊಂಡು, ಬ್ಲಾಕ್‌ಮೇಲ್ ಮಾಡುತ್ತಿರುವುದಾಗಿ ಸಮೂಹ ಮಾಧ್ಯಮಗಳಲ್ಲಿ ಪ್ರಚಾರವಾಗಿರುತ್ತದೆ. ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ, ಕೆಲವರ ಮೇಲೆ ಅತ್ಯಾಚಾರ ಸಹ ಮಾಡುತ್ತಿರುವ ತುಣುಕುಗಳಿರುವ ಪೆನ್‌ಡ್ರೈವ್‌ಗಳು ಈಗ ಜನ ಸಾಮಾನ್ಯರ ಕೈಗೆ ಸಿಕ್ಕಿ, ಇಡೀ ಸಮಾಜ ತಲೆ ತಗ್ಗಿಸುವ ಸ್ಥಿತಿ ಏರ್ಪಟ್ಟಿದೆ ಎಂದು ಹೇಳಿದ್ದಾರೆ.

Join Whatsapp