ಹುಬ್ಬಳ್ಳಿ ದುರಂತ: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾ*ವು

Prasthutha|

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. .

- Advertisement -

ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಮೃತಪಟ್ಟ ಮಾಲಾಧಾರಿಗಳು. ಇವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇನ್ನುಳಿದ 7 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಈ ನಡುವೆ, ಹೆಚ್ಚಿನ ಚಿಕಿತ್ಸೆ ಕೂಡಿಸಲು ಸಚಿವ ಸಂತೋಷ್ ಲಾಡ್ ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ.



Join Whatsapp