Home ಟಾಪ್ ಸುದ್ದಿಗಳು ಹೊಸ ವರ್ಷ ಸ್ವಾಗತಕ್ಕೆ ಎಲ್ಲೆಲ್ಲೂ ಸಜ್ಜು: ರಾಜ್ಯದ ಯಾವೆಲ್ಲ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ?

ಹೊಸ ವರ್ಷ ಸ್ವಾಗತಕ್ಕೆ ಎಲ್ಲೆಲ್ಲೂ ಸಜ್ಜು: ರಾಜ್ಯದ ಯಾವೆಲ್ಲ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ?

ಬೆಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ ಶುರುವಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್‌ಗೆ ಸಾಕಷ್ಟು ಮಂದಿ ಪ್ರವಾಸಿತಾಣಗಳಿಗೆ ಮುಗಿಬೀಳುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಪ್ರವಾಸಿಗರ ಹಾಟ್‌ಸ್ಪಾಟ್ ಚಿಕ್ಕಳ್ಳಾಪುರದ ನಂದಿಬೆಟ್ಟ ಪ್ರವೇಶಕ್ಕೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 7 ಗಂಟೆ ವರೆಗೆ ನಿರ್ಬಂಧ ಹೇರಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಂಜೆ 7ಗಂಟೆ ನಂತರ ಪ್ರವಾಸಿಗರಿಗೆ ನಿರ್ಬಂಧ ಇರಲಿದ್ದು, ಜನವರಿ 1ರಂದು ಎಂದಿನಂತೆ ತೆರಳಬಹುದು. ಇನ್ನು ಕೆಆರ್​ಎಸ್ ಹಿನ್ನೀರು, ಬಲಮುರಿ, ಎಡಮುರಿ, ಕಾವೇರಿ ನದಿ ತೀರ ಪ್ರವೇಶಕ್ಕೆ ಜನವರಿ 1ರ ರಾತ್ರಿವರೆಗೂ ನಿರ್ಬಂಧ ಹೇರಲಾಗಿದೆ. ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಇತರೆ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆ ತನಕ ಬಂದ್ ಆಗಲಿವೆ. ಹಾಗೆಯೇ ಹೋಮ್​ ಸ್ಟೇ, ರೆಸಾರ್ಟ್​​ಗಳಲ್ಲಿ ಇಂದು ರಾತ್ರಿ 10 ಗಂಟೆಗೆ ಡಿಜೆ, ಸ್ಪೀಕರ್​ ಬಂದ್ ಮಾಡಬೇಕು. ಅನುಮತಿ ಪಡೆಯದೇ ಪಾರ್ಟಿ ಮಾಡುವಂತಿಲ್ಲ ಎಂದು ಎಸ್​​ಪಿ ಆದೇಶಿಸಿದ್ದಾರೆ.

ಕಾರವಾರದ ಮುರುಡೇಶ್ವರ ಕಡಲ ತೀರ 20 ದಿನದಿಂದ ಬಂದ್ ಆಗಿತ್ತು. ಇಂದಿನಿಂದ ಪ್ರವಾಸಿಗರಿಗೆ ತೆರೆಯಲಾಗುತ್ತಿದೆ. ಜೋಗ ಜಲಪಾತ ವೀಕ್ಷಣೆಗೂ, ಜನವರಿ 1ರಿಂದ ಮಾರ್ಚ್​​ 15ರ ತನಕ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಆದರೆ ಈಗ ಜಲಪಾತ ವೀಕ್ಷಣೆಗಿದ್ದ ನಿರ್ಬಂಧ ತೆರವು ಮಾಡಲಾಗಿದೆ. ಜೋಗ ನಿರ್ವಹಣಾ ಪ್ರಾಧಿಕಾರ ಪ್ರವೇಶದ್ವಾರ ಬಿಟ್ಟು ಉಳಿದೆಡೆಯಿಂದ ಫಾಲ್ಸ್​ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

Join Whatsapp
Exit mobile version