Home ಟಾಪ್ ಸುದ್ದಿಗಳು ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ...

ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.

ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್ ‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ. ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ನಮ್ಮ ದೇಶವು ಮೀನುಗಾರಿಕಾ ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ಮೂರನೇ ಸ್ಥಾನ ಪಡೆದಿದೆ. ಇದಕ್ಕೆ ಜಿಲ್ಲೆಯ ಮೀನುಗಾರರ ಕೊಡುಗೆಯು ಅಪಾರ. ಮಲ್ಪೆಯ ಸರ್ವಋತು ಮೀನುಗಾರಿಕೆ ಬಂದರನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯ ಆರಂಭಿಕ ಹಂತವಾಗಿ ಸರ್ವೇ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

Join Whatsapp
Exit mobile version