Home ಟಾಪ್ ಸುದ್ದಿಗಳು ಛತ್ತೀಸ್ ಗಡದಲ್ಲಿ1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಛತ್ತೀಸ್ ಗಡದಲ್ಲಿ1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ರಾಜ್ಯದಲ್ಲಿಯೇ ದೊರೆಯುವುದಾದರೆ ಕೊಡಿಸಲಿ ಎಂದರು.

Join Whatsapp
Exit mobile version