ಈ ಬಾರಿ 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ: ಮಹೇಶ್ ಶೆಟ್ಟಿ ತಿಮರೋಡಿ

Prasthutha|

ಪುತ್ತೂರು: ವಿದ್ಯಾರ್ಥಿನಿ ಸೌಜನ್ಯ ಸಾವಿಗೆ ನಮಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈಗಾಗಲೇ ಈ ಕುರಿತು ರಾಜ್ಯದಾದ್ಯಂತ ನಿರಂತರ ಹೋರಾಟಗಳನ್ನು ನಡೆಸುತ್ತಿದ್ದೇವೆ, ಈ ಹೋರಾಟದ ಮುಂದಿನ ಭಾಗವಾಗಿ ಈ ಬಾರಿ ನೋಟಾ ಅಭಿಯಾನವನ್ನು ಆರಂಭಿಸಿದ್ದೇವೆ ಎಂದು ಸೌಜನ್ಯ ಪರ ಹೋರಾಟ ಸಮಿತಿ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.

- Advertisement -

ಪುತ್ತೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನೋಟಾ ಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ನೋಟಾ ಮತವನ್ನು ಅತೀ ಹೆಚ್ಚು ಚಲಾಯಿಸುವ ಮೂಲಕ ನಮಗೆ ನ್ಯಾಯ ಪಡೆದುಕೊಳ್ಳುತ್ತೇವೆ. ಎಲ್ಲಿ ಹೆಚ್ಚು ನೋಟಾ‌ ಮತ ಚಲಾವಣೆಯಾಗುತ್ತೋ ಆ ಕ್ಷೇತ್ರ ದೇಶದ ಗಮನ ಸೆಳೆಯುತ್ತೆ. ಸಮಸ್ಯೆಗೆ ಪರಿಹಾರವೂ ದೊರೆಯುತ್ತದೆ ಎನ್ನುವ ವಿಶ್ವಾಸವೂ ಎಂದರು.

ಈ ಬಾರಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ ಬೀಳುವ ಸಾಧ್ಯತೆಯಿದೆ ಎಂದರು. ಅಲ್ಲದೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಹಿಂದೂ ಮುಖಂಡರನ್ನು ಮುಗಿಸುವ ಕೆಲಸ ನಡೆಯುತ್ತಿದೆ. ಬಿಜೆಪಿ ಹಿಂದೂಗಳ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಮಹೇಶ್ ತಿಮರೋಡಿ ಆರೋಪಿಸಿದ್ದಾರೆ.

Join Whatsapp