ಕೋವಿಡ್‌ ಎರಡನೇ ಅಲೆ | ಒಂದು ಕೋಟಿ ಮಂದಿಯ ಉದ್ಯೋಗ ನಷ್ಟ : CMEI ವರದಿ

Prasthutha|

ನವದೆಹಲಿ : ಕೋವಿಡ್‌ ಸೋಂಕಿನ ಹಠಾತ್‌ ಏರಿಕೆಯಿಂದ ದೇಶದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಭಾರೀ ದೊಡ್ಡ ಹೊಡೆತ ಬಿದ್ದಿದೆ. ಕೋವಿಡ್‌ ಎರಡನೇ ಅಲೆಯಲ್ಲಿ ದೇಶದಲ್ಲಿ ಸುಮಾರು 1 ಕೋಟಿ ಉದ್ಯೋಗ ನಷ್ಟವಾಗಿದೆ ಎಂದು ವರದಿಯೊಂದು ತಿಳಿಸಿದೆ. ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ ವರದಿಯಲ್ಲಿ ಇದನ್ನು ಅಂದಾಜಿಸಲಾಗಿದೆ.

- Advertisement -

ಕೋವಿಡ್‌ ಕಾರಣದಿಂದ ದೇಶದಲ್ಲಿ ಒಂದು ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಶೇ.97 ಮಂದಿಯ ಆದಾಯ ಕುಸಿದಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮಹೇಶ್‌ ವ್ಯಾಸ್‌ ಹೇಳಿದ್ದಾರೆ.

ಕಳೆದ ವರ್ಷದ ಲಾಕ್‌ ಡೌನ್‌ ನಲ್ಲೂ ಇದೇ ಪರಿಸ್ಥಿತಿಯಿತ್ತು. ಅದರಿಂದ ಸ್ವಲ್ಪ ಚೇತರಿಸಿಕೊಳ್ಳುವಷ್ಟರಲ್ಲಿ ಮತ್ತೆ ಲಾಕ್‌ ಡೌನ್‌ ಆಗಿರುವುದರಿಂದ ಭಾರೀ ದೊಡ್ಡ ಪ್ರಮಾಣದ ಉದ್ಯೋಗ ನಷ್ಟವನ್ನುಂಟು ಮಾಡಿದೆ.

Join Whatsapp