ವಿಮಾನದ ವಾಶ್ ರೂಮ್ ನಲ್ಲಿ ಒಂದು ಕೆಜಿ ಚಿನ್ನ ಪತ್ತೆ

Prasthutha|

ಬೆಂಗಳೂರು: ವಿಮಾನದ ವಾಶ್ ರೂಮ್ ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

- Advertisement -


ಅಕ್ಟೋಬರ್ 24ರಂದು ಅಬುಧಾಬಿಯಿಂದ ಬಂದ ಇವೈ 238 ವಿಮಾನವನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ವಿಮಾನದ ವಾಶ್ ರೂಮ್ ನಲ್ಲಿ ಕಪ್ಪು ಬಣ್ಣದ ಚೀಲದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿರುವುದು ಪತ್ತೆಯಾಗಿದೆ.


ಒಂದು ಕೆಜಿ ಅಧಿಕ ತೂಕದ 80 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.