Home ಟಾಪ್ ಸುದ್ದಿಗಳು ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ 10 ಮಂದಿ ಪದಗ್ರಹಣ!

ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ 10 ಮಂದಿ ಪದಗ್ರಹಣ!

ಬೆಂಗಳೂರು: ಶಿವಶಂಕರ್ ಅಮರಣ್ಣವರ್, ಮಕ್ಕಿಮನೆ ಗಣೇಶಯ್ಯ ಉಮಾ, ವೇದವ್ಯಾಸಚಾರ್ ಶ್ರೀಶಾನಂದ, ಹಂಚಟೆ ಸಂಜೀವಕುಮಾರ್, ಪದ್ಮರಾಜ್ ನೇಮಚಂದ್ರ ದೇಸಾಯಿ, ಪಂಜಿಗಡ್ಡೆ ಕೃಷ್ಣ ಭಟ್, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ ಮತ್ತು ಸವಣೂರು ವಿಶ್ವಜೀತ್ ಶೆಟ್ಟಿ ಅವರು ಕರ್ನಾಟಕ ಉಚ್ಛ ನ್ಯಾಯಲಯದ ನ್ಯಾಯಮೂರ್ತಿಗಳಾಗಿ ಇಂದು ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಭೋದಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಉಪಸ್ಥಿತರಿದ್ದರು.

Join Whatsapp
Exit mobile version