ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಹಲ್ಲೆ ಕೇಸ್: 10 ಮಂದಿಯ ಬಂಧನ

Prasthutha|

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಮೃತದೇಹ ವೀಕ್ಷಿಸಲು ಬಂದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಗ್ರಾಮಸ್ಥರು ಅಟ್ಟಾಡಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಇಂದು ಮುಂಜಾನೆ 10 ಮಂದಿ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗ್ಗೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಶೋಭಾ ಮೃತಪಟ್ಟಿದ್ದರು. ಘಟನೆ ಬೆಳಗ್ಗೆ ನಡೆದಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಸಂಜೆ ವೇಳೆ ಗ್ರಾಮಕ್ಕೆ ತೆರಳಿ ಮೃತದೇಹ ವೀಕ್ಷಿಸಲು ಮುಂದಾಗಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿದಲ್ಲದೆ. ಗ್ರಾಮದ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದಾರೆ. ತೀವ್ರ ಆಕ್ರೋಶಗೊಂಡಿದ್ದ ಕೆಲ ಗ್ರಾಮಸ್ಥರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ. ಶಾಸಕರ ಬಟ್ಟೆ ಹಿಡಿದು ಜಗ್ಗಾಡಿದ್ದಾರೆ. ಈ ವೇಳೆ ಶಾಸಕರು ಧರಿಸಿದ ಬಟ್ಟೆ ಹರಿದಿದೆ.

Join Whatsapp