ಮಡಿಕೇರಿ: ಸಿಎಂ ಬೊಮ್ಮಾಯಿ ಮಂಡಿಸಿದ ಚೊಂಚಲ ಬಜೆಟ್ ನಲ್ಲಿ ಕೊಡಗಿಗೆ ಸ್ವಲ್ಪ ಪಾಲು ನೀಡಿದ್ದು, ಕೊಡವ ಜನಾಂಗ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ ನಿಡಿದ್ದಾರೆ.
ಅಲ್ಲದೆ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಬಗ್ಗೆಯೂ ಘೊಷಣೆ ಮಾಡಿದ್ದು ಅರಲ್ಲಿ ಒಂದು ವಿಶ್ವ ವಿದ್ಯಾಯವನ್ನು ಕೊಡಗಿನಲ್ಲಿ ಸ್ಥಾಪಿಸುವುದಾಗಿ ಘೊಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು. ಐಐಟಿ ಮಾದರಿಯಲ್ಲಿ ಕೆಐಟಿ ಸ್ಥಾಪನೆ ಮಾಡಲಾಗುವುದು. ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ ಮಾಡಲಾಗುವುದು.
ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಲಾಗುವುದು. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.