ಜಮ್ಮು-ಕಾಶ್ಮೀರ | ಕಂದಕಕ್ಕೆ ಬಿದ್ದ ಬಸ್: 10 ಮಂದಿ ಸಾವು, 55 ಮಂದಿಗೆ ಗಾಯ

Prasthutha|

ಶ್ರೀನಗರ: ಬಸ್ಸೊಂದು ಸೇತುವೆ ಮೇಲಿನಿಂದ ಉರುಳಿ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 55 ಮಂದಿ ಗಾಯಗೊಂಡಿರವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

- Advertisement -


ಬಸ್ ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಮೂಲತಃ ಬಿಹಾರದವರಾಗಿದ್ದಾರೆ. ಕುಟುಂಬದಲ್ಲಿ ಮಗುವಿಗೆ ‘ಮುಂಡನಾ’ ಕಾರ್ಯಕ್ರಮವಿದ್ದರಿಂದ ಎಲ್ಲಾ ಕುಟುಂಬ ಸದಸ್ಯರು ಮತ್ತು ಆತ್ಮೀಯರು ಸಮಾರಂಭಕ್ಕೆಂದು ಕತ್ರಾಗೆ ತೆರಳಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ವೈಷ್ಣೋದೇವಿ ದೇಗುಲಕ್ಕೆ ಯಾತ್ರೆಯನ್ನು ಕೈಗೊಂಡಿದ್ದ ಸಂದರ್ಭ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.


ಜಮ್ಮು – ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಜಜ್ಜರ್ ಕೋಟ್ಲಿ ಬಳಿ ಘಟನೆ ನಡೆದಿದೆ. ರಕ್ಷಣಾ ಕಾರ್ಯಚರಣೆ ಬಹುತೇಕ ಪೂರ್ಣಗೊಂಡಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಮ್ಮುವಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.