►ಮತ್ತೆ ಲಾಕ್‌ಡೌನ್ ಭೀತಿ?
ಬೆಂಗಳೂರು: ಕೋವಿಡ್ ಎರಡನೇ ಅಲೆಯ ಆರ್ಭಟ ಕೊಂಚ ಕಡಿಮೆಯಾಗುತ್ತಿದ್ದಂತೆಯೇ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಎಚ್ಚರಿಕೆ ನೀಡಿದೆ.
ಮಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳು ರೆಡ್ ಝೋನ್ ನಲ್ಲಿ ಇದೆ. ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳು ಅಲರ್ಟ್ ಆಗಿರುವಂತೆ ಕೇಂದ್ರ ಎಚ್ಚರಿಸಿದೆ.
ಆದರೆ ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕು ಗಣನೀಯ ಇಳಿಕೆ ಕಂಡುಬಂದಿದ್ದು, ಇಂದು ಕೇವಲ 126 ಮಂದಿಯಲ್ಲಿ ಕೊರೋನಾ ಸೋಂಕು ಲಕ್ಷಣಗಳು ಪತ್ತೆಯಾಗಿದೆ. ಇದೇ ವೇಳೆ, 289 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ಧಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 2.19ಕ್ಕೆ ಇಳಿದಿದೆ. ಆದರೆ, ಸೋಂಕಿನಿಂದ ಮೃತರಾದವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಇಂದು 10 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ, ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸಾವಿನ ಸಂಖ್ಯೆ 1325ಕ್ಕೇರಿದೆ.