ಯುಪಿಯಲ್ಲಿ ಭೀಕರ ರಸ್ತೆ ಅಪಘಾತ: 10 ಸಾವು, 7 ಮಂದಿಗೆ ಗಾಯ

Prasthutha|

ಪಿಲಿಭಿತ್ (ಉತ್ತರಪ್ರದೇಶ): ಹರಿದ್ವಾರದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಇಲ್ಲಿನ ಗಜ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

- Advertisement -

ಪಿಲಿಭಿತ್ನ ಗಜ್ರೌಲಾ ಪೊಲೀಸ್ ಠಾಣೆಯ ಪುರನ್ಪುರ್ ಹೆದ್ದಾರಿಯಲ್ಲಿ ಡಿಸಿಎಂ ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ನಂತರ ಈ ಅಪಘಾತ ಸಂಭವಿಸಿದೆ.

ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಐವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ಇಬ್ಬರನ್ನು ಬರೇಲ್ವಿಗೆ ಕಳುಹಿಸಲಾಗಿದೆ.

- Advertisement -

ಹರಿದ್ವಾರದಿಂದ ವಾಪಸಾಗುತ್ತಿದ್ದ ಡಿಸಿಎಂ ವಾಹನ ಇಂದು ಮುಂಜಾನೆ 4.30ರ ಸುಮಾರಿಗೆ ಅಪಘಾತಕ್ಕೀಡಾಗಿ 10 ಮಂದಿ ಮೃತಪಟ್ಟು, 7 ಮಂದಿ ಗಾಯಗೊಂಡಿದ್ದಾರೆ. 17 ಮಂದಿಯಲ್ಲಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರನ್ನು ಬರೇಲ್ವಿಗೆ ಕಳುಹಿಸಲಾಗಿದೆ. ನಾವು ಅವರ ಕುಟುಂಬಗಳನ್ನು ಸಂಪರ್ಕಿಸಿದ್ದೇವೆ” ಎಂದು ಪಿಲಿಭಿತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪುಲ್ಕಿತ್ ಖರೆ ಹೇಳಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ

Join Whatsapp