ಬನಿಹಲ್ (ಜಮ್ಮು): ಕಾರೊಂದು ಕಮರಿಗೆ ಉರುಳಿ 10 ಮಂದಿ ಮೃತಪಟ್ಟ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬ್ಯಾಟರಿ ಚಶ್ಮಾ ಪ್ರದೇಶದಲ್ಲಿ ಗುರುವಾರ ಮಧ್ಯರಾತ್ರಿ 1.15ರ ಸುಮಾರಿಗೆ ಘಟನೆ ಸಂಭವಿಸಿದೆ.
ಸ್ಕಿಡ್ ಆದ ಷೆವರ್ಲೆ ಟವೆರಾ ಕಾರು, 300 ಅಡಿ ಆಳದ ಕಮರಿಗೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಭಾರಿ ಮಳೆಯ ನಡುವೆ 10 ಪ್ರಯಾಣಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.