ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 10 ಮಂದಿ ಸಾವು

Prasthutha|

ಚೆನ್ನೈ: ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟಗೊಂಡು 10 ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಳೂರಿನಲ್ಲಿ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

- Advertisement -


ಇಂದು ಬೆಳಗ್ಗೆ 9.30ರ ಸುಮಾರಿಗೆ ಕಾರ್ಮಿಕರು ಘಟಕದೊಳಗೆ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಸದ್ಯ ಇಬ್ಬರ ಮೃತದೇಹಗಳು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಅರಿಯಲೂರು ಮತ್ತು ನೆರೆಯ ಪೆರಂಬಲೂರು ಜಿಲ್ಲೆಗಳಿಂದ ಅಗ್ನಿಶಾಮಕ ದಳದ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.