ಗಾಂಧಿನಗರ: ಟ್ರಕ್ ಹಾಗೂ ಮಿನಿ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 10 ಜನ ಸಾವಿಗೀಡಾದ ಘಟನೆ ಗುಜರಾತ್ ನ ಅಹಮದಾಬಾದ್ ಬಗೋದರ ಹೆದ್ದಾರಿಯಲ್ಲಿ ನಡೆದಿದೆ.
ಮೃತರೆಲ್ಲ ಚೋಟಿಲಾ ಕ್ಷೇತ್ರದ ದರ್ಶನ ಪಡೆದು ಮಿನಿ ಟ್ರಕ್ ನಲ್ಲಿ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ. ಐವರು ಮಹಿಳೆಯರು, ಮೂವರು ಮಕ್ಕಳು ಹಾಗೂ ಇಬ್ಬರು ಪುರುಷರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.