ಲಕ್ನೋದಲ್ಲಿ ಗೋಡೆ ಕುಸಿದು 10 ಮಂದಿ ಸಾವು

Prasthutha|

ಲಕ್ನೋ: ಭಾರೀ ಮಳೆಯಿಂದಾಗಿ ಗೋಡೆ ಕುಸಿದು 10 ಮಂದಿ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡಿರುವ ದಾರುಣ ಘಟನೆ ನಗರದ ದಿಲ್ ಶುಕ್ ಪ್ರದೇಶದಲ್ಲಿ ನಡೆದಿದೆ.

- Advertisement -

ಗಾಯಾಳುಗಳನ್ನು ನಗರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಮತ್ತು ಗಾಯಾಳುಗಳ ಚಿಕಿತ್ಸೆಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಜೊತೆಗೆ, ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣೆಗೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ರಾಜ್ಯದಲ್ಲಿ ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಘಟನೆ ನಡೆದಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಮಹಿಳೆಯರು, ಮಕ್ಕಳೂ ಸೇರಿದ್ದಾರೆ. ಉಳಿದಂತೆ, ಇಬ್ಬರು ಮಹಿಳೆಯರು ಸೇರಿ ಓರ್ವ ಮಗುವಿಗೆ ಗಾಯವಾಗಿದೆ.

ಘಟನಾ ಸ್ಥಳದಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಕೆಲವು ಕಾರ್ಮಿಕರು ದಿಲ್ಕುಶಾ ಪ್ರದೇಶದಲ್ಲಿನ ಆರ್ಮಿ ಎನ್ ಕ್ಲೇವ್ ನ ಹೊರಗೆ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ರಾತ್ರಿಯ ಭಾರೀ ಮಳೆಯಿಂದಾಗಿ, ಆರ್ಮಿ ಎನ್ ಕ್ಲೇವ್ ನ ಗಡಿ ಗೋಡೆ ಕುಸಿದಿದೆ ಎಂದು ಜಂಟಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ.

ರಾತ್ರಿಯ ಎಡೆಬಿಡದ ಮಳೆಯ ನಂತರ ಇಂದು ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



Join Whatsapp