ವಿಧಾನಸೌಧದಲ್ಲಿ 10 ಲಕ್ಷ ರೂ. ಪತ್ತೆ: ಆರೋಪಿ ಇಂಜಿನಿಯರ್’ಗೆ ಜಾಮೀನು

Prasthutha|

ಬೆಂಗಳೂರು: ವಿಧಾನಸೌಧದಲ್ಲಿ 10 ಲಕ್ಷ ರೂ. ನಗದು ವಶಪಡಿಸಿಕೊಂಡ ಪ್ರಕರಣದಲ್ಲಿ ಬಂಧಿತನಾಗಿದ್ದ ಮಂಡ್ಯ ಮೂಲದ ಪಿಡಬ್ಲ್ಯೂಡಿ ಕಿರಿಯ ಎಂಜಿನಿಯರ್ ಜಗದೀಶ್’ಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

- Advertisement -


ವಿಧಾನಸೌಧದ ಮುಖ್ಯದ್ವಾರ ಬಳಿ 10.5 ಲಕ್ಷ ಹಣ ಸಿಕ್ಕಿದ ಪ್ರಕರಣದಲ್ಲಿ ಜಗದೀಶ್’ನನ್ನು ಬಂಧಿಸಿದ್ದ ವಿಧಾನಸೌಧ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಇನ್’ಸ್ಪೆಕ್ಟರ್ ಕುಮಾರಸ್ವಾಮಿ ಅವರು ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದರು. ಆದರೂ ಜಗದೀಶ್ ಯಾರಿಗೆ ಹಣ ಕೊಡಲು ಬಂದಿದ್ದ ಎನ್ನುವ ಮಾಹಿತಿ ಬಾಯಿ ಬಿಟ್ಟಿರಲಿಲ್ಲ. ಆದ್ದರಿಂದ ಲಂಚದ ರೂಪದಲ್ಲಿ ಹಣ ಕೊಡಲು ಬಂದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ತನಿಖೆ ಮುಂದುವರಿಸಲಾಗಿತ್ತು.


ಜಗದೀಶ್ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಕೊನೆಯ ದೂರವಾಣಿ ಕರೆ ಹಾಗೂ ಕೆಲ ವಾಟ್ಸಪ್ ಚಾಟ್’ಗಳನ್ನು ಡಿಲೀಟ್ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಜಗದೀಶ್ ಯಾರ ಕೈಕೆಳಗೆ ಕೆಲಸ ಮಾಡುತ್ತಿದ್ದ ಎನ್ನುವುದರ ಕುರಿತಾಗಿ ಮಾಹಿತಿ ಸಂಗ್ರಹ ಮಾಡಿದ್ದರು. ಆರೋಪಿ ಬಾಯಿಬಿಡಲಿಲ್ಲ ಅಂದರೆ ಸಿನೀಯರ್ ಎಂಜನಿಯರ್’ಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಮುಂದಾಗಿದ್ದರು. ಇಂದು ಆರೋಪಿ ಜಗದೀಶ್’ನನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ನ್ಯಾಯಾಲಯ ಆರೋಪಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

Join Whatsapp