ಶಾಲಾ ಕಾಲೇಜುಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಕಡ್ಡಾಯ: ಸರ್ಕಾರ ಆದೇಶ

Prasthutha|

ಬೆಂಗಳೂರು: ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ 10 ನಿಮಿಷ ಧ್ಯಾನ ನಡೆಸುವಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಸಂಬಂಧ ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸುತ್ತೋಲೆಯನ್ನು ಕಳುಹಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷದ ಧ್ಯಾನ ಶಿಬಿರ ನಡೆಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ಸುಧಾರಿಸಲು, ಸಕಾರಾತ್ಮಕ ಚಿಂತನೆ ಮೂಡಿಸಲು, ಒತ್ತಡ ರಹಿತ ಕಲಿಕೆ, ವ್ಯಕ್ತಿತ್ವ ವಿಕಸನ ಮತ್ತು ಆ ಮೂಲಕ ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳುವ ಗುರಿಯನ್ನು ಇದು ಹೊಂದಿದೆ ಎಂದು ತಿಳಿಸಿದ್ದಾರೆ.



Join Whatsapp