ನೀರು ತುಂಬಿದ್ದ ಬಕೆಟ್ ಗೆ ಬಿದ್ದು 10 ತಿಂಗಳ ಮಗು ಮೃತ್ಯು

Prasthutha|

ದಾವಣಗೆರೆ: 10 ತಿಂಗಳ ಮಗು ಮನೆಯ ಮುಂಭಾಗ ಆಟವಾಡುತ್ತಿದ್ದಾಗ ನೀರು ತುಂಬಿದ ಬಕೆಟ್ಗೆ ಬಿದ್ದು ಮೃತಪಟ್ಟ ಮನಕಲುಕುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಮಂಜುನಾಥ್ ಹಾಗೂ ತಾರ ದಂಪತಿಯ 10 ತಿಂಗಳ ಮಗು ಅನುಶ್ರಾವ್ಯ ಮೃತ ಕಂದಮ್ಮ. ಮಗು ಮನೆಯ ಮುಂಭಾಗ ಆಟವಾಡುತ್ತಿದ್ದಾಗ ದುರ್ಘಟನೆ ನಡೆದಿದ್ದು, ತಕ್ಷಣ ಮಗುವಿನ ಪೋಷಕರು ಜಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಗು ಮಾರ್ಗ ಮಧ್ಯೆಯೇ ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Join Whatsapp