ಬಸ್ ಅಪಘಾತ: 7 ಮಹಿಳೆಯರು ಸೇರಿ 10 ಮಂದಿ ಮೃತ್ಯು

Prasthutha|

ನಾಸಿಕ್: ಬಸ್ಸೊಂದು ಟ್ರಕ್’ಗೆ ಡಿಕ್ಕಿ ಹೊಡೆದ ಪರಿಣಾಮ 7 ಮಹಿಳೆಯರು ಸೇರಿ 10 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಬಳಿ ನಡೆದಿದೆ.

- Advertisement -


ಥಾಣೆ ಜಿಲ್ಲೆಯ ಅಂಬರನಾಥದಿಂದ ಹೊರಟಿದ್ದ ಖಾಸಗಿ ಐಷಾರಾಮಿ ಬಸ್ ಅಹಮದ್ ನಗರ ಜಿಲ್ಲೆಯ ಶಿರಡಿಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.


ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್ ನ ಸಿನ್ನಾರ್ ತೆಹಸಿಲ್ ನ ಪಥರೆ ಶಿವಾರ್ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಗಾಯಾಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp