ಕಾರು – ಕ್ರೂಸರ್ ಡಿಕ್ಕಿ: 10 ಮಂದಿ ವಿದ್ಯಾರ್ಥಿಗಳಿಗೆ ಗಾಯ

Prasthutha|

ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಹಾಗೂ ಕ್ರೂಸರ್ ವಾಹನ ನಡುವೆ ಡಿಕ್ಕಿ ಹೊಡೆದು ಶಾಲಾ ಪ್ರವಾಸಕ್ಕೆ ಬಂದಿದ್ದ 10 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ದಾರುಣ ಘಟನೆ ನಡೆದಿದೆ.

- Advertisement -


ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಲಬುರಗಿ ಜಿಲ್ಲೆಯ ಅಫಜಲ್’ಪುರದಿಂದ ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಅಫಜಲ್’ಪುರಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದ್ದು, ಅಜ್ಜಂಪುರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp