Home ಕರಾವಳಿ ಉಪ್ಪಿನಂಗಡಿ | ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಕಾಯ್ದೆಯಡಿ ಬಂಧನ !

ಉಪ್ಪಿನಂಗಡಿ | ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಕಾಯ್ದೆಯಡಿ ಬಂಧನ !

►ಮಗುವಿನ ಜನನಕ್ಕೆ ಕಾರಣನಾದ ಆರೋಪಿ

ಉಪ್ಪಿನಂಗಡಿ: ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಮಗುವಿನ ಜನನಕ್ಕೆ ಕಾರಣನಾದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.


ಉಪ್ಪಿನಂಗಡಿಯ ಹಿರೆಬಂಡಾಡಿ ಗ್ರಾಮದ ಮದ್ಮಿತ್ತಿಮಾರು ನಿವಾಸಿ ಕೇಶವ (34) ಅತ್ಯಾಚಾರಗೈದ ಆರೋಪಿ ಎಂದು ಗುರುತಿಸಲಾಗಿದೆ.


ಪ್ರೌಢಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ತುಂಬು ಗರ್ಭವತಿಯಾಗಿರುವುದು ಬೆಳಕಿಗೆ ಬಂದಿತ್ತು.


ಆಕೆ ಮಂಗಳೂರು ಪರಿಸರದ ಆಸ್ಪತ್ರೆಯೊಂದರಲ್ಲಿ ಗುರುವಾರ ಸಹಜ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಈ ವಿಚಾರವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಉಪ್ಪಿನಂಗಡಿಯ ಹಿರೆಬಂಡಾಡಿ ಗ್ರಾಮದ ಮದ್ಮಿತ್ತಿಮಾರು ನಿವಾಸಿ ಕೇಶವ ಅತ್ಯಾಚಾರ ಮಾಡಿರುವುದಾಗಿ ಬಾಲಕಿ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಬಂಧಿಸಿದ್ದಾರೆ.

Join Whatsapp
Exit mobile version