ಉಡುಪಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪಿಗೆ 10 ವರ್ಷ ಜೈಲು

Prasthutha|

- Advertisement -

ಉಡುಪಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಆರೋಪಿ ದೋಷಿಯೆಂದು ನ್ಯಾಯಾಲಯ ತೀರ್ಪು ನಿಡಿದೆ.

 ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿರುವ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಅಪರಾಧಿಗೆ 10 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

- Advertisement -

ಕುಂದಾಪುರದ ಅಮಾಸೆಬೈಲು ನಿವಾಸಿ ಸುರೇಶ್‌ ಕೊಠಾರಿ ಎಂಬಾತ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದು ಈತ ಶಾಲೆಯೊಂದರ ಬಸ್‌ ಚಾಲಕನಾಗಿದ್ದ.

ತಾನು ಕೆಲಸ ಮಾಡುತ್ತಿದ್ದ ಶಾಲಾ ಬಸ್‌ನಲ್ಲಿ ಆಯಾ ವೃತ್ತಿ ಮಾಡುತ್ತಿದ್ದ 17 ವರ್ಷದ ಅಪ್ತಾಪ್ತೆಯನ್ನು ಬೈಕಿನಲ್ಲಿ ಕಾಡು ಪ್ರದೇಶಕ್ಕೆ ಕರೆದೊಯ್ದು ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿದ್ದು ಅನಂತರದ ದಿನಗಳಲ್ಲಿಯೂ ಆಕೆ ಇಚ್ಛೆಗೆ ವಿರುದ್ಧ ದೌರ್ಜನ್ಯವೆಸಗಿದ್ದ. ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿದ್ದು ತನ್ನ ಮನೆಯ ಬಚ್ಚಲು ಕೋಣೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ನಂತರ ಆಕೆ, ಮಗುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ನೊಂದ ಬಾಲಕಿ ತಾಯಿ ನೀಡಿದ ದೂರಿನ ಅನ್ವಯ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Join Whatsapp