ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ, ಕಾದು ನೋಡಿ: ಈಶ್ವರಪ್ಪ

Prasthutha|

ಶಿವಮೊಗ್ಗ: ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ. ಈ ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಈಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

- Advertisement -


ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮೂಲಕ ಬಿಎಲ್ ಸಂತೋಷ್ ಅವರಿಗೆ ಸವಾಲು ಹಾಕಿದ್ದು, ಈ ವಿಚಾರವಾಗಿ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಕಾಂಗ್ರೆಸ್ ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಹೇಳಿದ್ದಾರೆ.

Join Whatsapp