ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಹುಟ್ಟಿ ಬರಬೇಕು: ಕುಮಾರಸ್ವಾಮಿ

Prasthutha|

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಹುಟ್ಟಿ ಬರಬೇಕು ಎಂದು ಹೇಳಿದ್ದಾರೆ.

- Advertisement -


ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಕರ್ನಾಟಕ ಲೋಕಾಯುಕ್ತದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಹೆದರುವುದಿಲ್ಲ. ತಮ್ಮ ವಿರುದ್ಧದ ತನಿಖೆ ಪೂರ್ಣಗೊಂಡಿದ್ದರೆ, ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ಐಟಿ) ವರದಿಯನ್ನು ಸುಪ್ರೀಂ ಕೋರ್ಟ್ ಗೆ ಏಕೆ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದರು.


ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಅನುಮೋದನೆಗೆ ಕೋರಿದ್ದಾರೆ. 2023ರ ನವೆಂಬರ್ ನಲ್ಲಿ ಅನುಮತಿ ಕೇಳಿದ್ದು, ಸುಮಾರು ಹತ್ತು ತಿಂಗಳಾಗಿದೆ. ಆದರೆ ನೆನ್ನೆ ಬೆಳಗ್ಗೆಯಿಂದ ಸಂಜೆವರೆಗೂ ಕುಮಾರಸ್ವಾಮಿಗೆ ಮತ್ತೆ ಗಣಿ ಸಂಕಷ್ಟ ಶುರುವಾಗಿದೆ ಅಂತ ವರದಿಗಳು ಬರುತ್ತಿವೆ. 2023ರ ಜುಲೈನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಬಂದಾಗಲೇ ವರ್ಗಾವಣೆ ದಂಧೆಗೆ ಮುಂದಾದರು. ಅದರ ಬಗ್ಗೆ ನಾನು ವಾಗ್ದಾಳಿ ನಡೆಸಿದೆ ಇದು ಸರ್ಕಾರಕ್ಕೆ ಮುಜುಗರ ತಂದಿತು. ಆಗ ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಅಂತೆಲ್ಲಾ ಹೇಳಿದರು ಎಂದು ಟೀಕಿಸಿದರು.



Join Whatsapp