Home ಟಾಪ್ ಸುದ್ದಿಗಳು ಕರ್ನಾಟಕದಿಂದ ತೆಲಂಗಾಣಕ್ಕೆ 1000 ಕೋಟಿ ರೂ. ಕೊಡಲಾಗಿದೆ: ಪ್ರಹ್ಲಾದ್‌ ಜೋಶಿ

ಕರ್ನಾಟಕದಿಂದ ತೆಲಂಗಾಣಕ್ಕೆ 1000 ಕೋಟಿ ರೂ. ಕೊಡಲಾಗಿದೆ: ಪ್ರಹ್ಲಾದ್‌ ಜೋಶಿ

ಕರ್ನಾಟಕದಿಂದ ತೆಲಂಗಾಣಕ್ಕೆ 1000 ಕೋಟಿ ರೂ. ಸಂಗ್ರಹಿಸಿ ಕೊಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕ ಎನ್ನುತ್ತಲೇ ಎಸ್‌ ಸಿ-ಎಸ್‌ ಟಿ ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದು, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದಲ್ಲಿ ಭ್ರಷ್ಟಾಚಾರದ ಮೇಲೆ ಭ್ರಷ್ಟಾಚಾರ ನಡೆಸಿದೆ. ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾದಲ್ಲಿ ಅಕ್ರಮ ನಡೆದಿದೆ. ಸಾವಿರಾರು ಕೋಟಿ ಸಂಗ್ರಹ ಮಾಡಿ ಆಗಾಗ ತೆಲಂಗಾಣಕ್ಕೆ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನೂರಾರು ಜನರಿಗೆ ವರ್ಗಾವಣೆ ಮಾಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತಿದ್ದೇ ಮಾಡಿರುವುದು ಎಂದು ವಾಗ್ದಾಳಿ ನಡೆಸಿದ್ದಾರೆ.

Join Whatsapp
Exit mobile version