ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ ಶೀಟ್ ಸಲ್ಲಿಕೆ

Prasthutha|

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಗುರುವಾರ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.

- Advertisement -

ರೋಸ್ ಅವೆನ್ಯೂ ಕೋರ್ಟ್‌ ಗೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು ಜುಲೈ 4 ರಂದು ವಿಚಾರಣೆ ನಡೆಯಲಿದೆ.

ಕುಸ್ತಿಪಟುಗಳ ದೂರಿನ ಮೇರೆಗೆ ದಾಖಲಿಸಿದ FIR ಆಧರಿಸಿ ನಡೆಸಿದ ತನಿಖೆ ಬಳಿಕ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 354, 354 A, 354 D ಮತ್ತು IPC ಸೆಕ್ಷನ್ 109/ 354/354 A/506ರ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸಂತ್ರಸ್ತೆಯ ಮತ್ತು ಆಕೆಯ ತಂದೆಯ ಹೇಳಿಕೆ ಆಧಾರದ ಮೇಲೆ ನಾವು ಪೋಕ್ಸೊ ರದ್ದತಿ ವರದಿ ಸಲ್ಲಿಸಿದ್ದೇವೆ ಎಂದು ದೆಹಲಿ ಪೊಲೀಸ್ ವಕ್ತಾರೆ ಸುಮನ್ ನಲ್ವಾ ಹೇಳಿದ್ದಾರೆ.



Join Whatsapp