ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಗುರುವಾರ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.
ರೋಸ್ ಅವೆನ್ಯೂ ಕೋರ್ಟ್ ಗೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು ಜುಲೈ 4 ರಂದು ವಿಚಾರಣೆ ನಡೆಯಲಿದೆ.
ಕುಸ್ತಿಪಟುಗಳ ದೂರಿನ ಮೇರೆಗೆ ದಾಖಲಿಸಿದ FIR ಆಧರಿಸಿ ನಡೆಸಿದ ತನಿಖೆ ಬಳಿಕ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 354, 354 A, 354 D ಮತ್ತು IPC ಸೆಕ್ಷನ್ 109/ 354/354 A/506ರ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸಂತ್ರಸ್ತೆಯ ಮತ್ತು ಆಕೆಯ ತಂದೆಯ ಹೇಳಿಕೆ ಆಧಾರದ ಮೇಲೆ ನಾವು ಪೋಕ್ಸೊ ರದ್ದತಿ ವರದಿ ಸಲ್ಲಿಸಿದ್ದೇವೆ ಎಂದು ದೆಹಲಿ ಪೊಲೀಸ್ ವಕ್ತಾರೆ ಸುಮನ್ ನಲ್ವಾ ಹೇಳಿದ್ದಾರೆ.