ಮುಂಬೈ: ಟಿ-20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡದ ವಿಜಯೋತ್ಸವದ ವೇಳೆ ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ವರದಿಯಾಗಿವೆ.
ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದಲ್ಲಿ 11 ಮಂದಿ ಗಾಯಗೊಂಡಿದ್ದಾರೆ.
ಗಾಯ ಮತ್ತು ಗುಂಪಿನಲ್ಲಿ ಉಸಿರಾಟ ಸಮಸ್ಯೆ ಉಂಟಾಗಿ 9 ಮಂದಿ ಜಿಟಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.
2ನೇ ಬಾರಿಗೆ ಟಿ–20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮಹಾರಾಣಿಯ ಕೊರಳಹಾರದಂತೆ ಕಂಗೊಳಿಸುವ ಮರೀನ್ ಡ್ರೈವ್ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಬಂದಿದ್ದರು.