ಬೆತುಲ್: ಬಸ್ ಹಾಗೂ ಕಾರಿನ ಮಧ್ಯೆ ಅಪಘಾತವಾಗಿ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ 6 ಮಂದಿ ಪುರುಷರು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಶಿವರಾಜ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.
ಕಾರಿನಲ್ಲಿದ್ದವರೆಲ್ಲರೂ ಮಹಾರಾಷ್ಟ್ರ ಮೂಲದ ಕಾರ್ಮಿಕರು. ಹಬ್ಬದ ನಿಮಿತ್ತ ಕಾರಿನಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು. ಚಾಲಕನ ನಿರ್ಲಕ್ಷ್ಯತನದಿಂದ ಕಾರು ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.