ಮುಂಬೈ: ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 11 ಜನರು ಮೃತಪಟ್ಟಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ.
ಮಹಾರಾಷ್ಟ್ರದ ನಾಸಿಕ್ ಔರಂಗಾಬಾದ್ ರಸ್ತೆಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಖಾಸಗಿ ಬಸ್ ಒಂದು ಕಂಟೈನರ್ ಗೆ ಡಿಕ್ಕಿ ಹೊಡೆದಿದ ಪರಿಣಾಮ ಈ ಘಟನೆ ಸಂಭವಿಸಿದೆ.
ಸುಮಾರು 30 ಮಂದಿ ಪ್ರಯಾಣಿಕರಿದ್ದ ಸ್ಲೀಪರ್ ಕೋಚ್ ಬಸ್ ನಂದೂರ್ ನಾಕಾ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕೆಲವೇ ಕ್ಷಣಗಳಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. 24 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ತಿಳಿಸಿದ್ದಾರೆ.
ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದ್ದು, ವೈದ್ಯರ ಅಧಿಕೃತ ಘೋಷಣೆಗಾಗಿ ಕಾಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಪರಿಹಾರ ಘೋಷಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.