Home ಟಾಪ್ ಸುದ್ದಿಗಳು ಶಿವಮೊಗ್ಗದಲ್ಲಿ 11 ಜನರಿಗೆ ಮಂಗನ ಕಾಯಿಲೆ ಪತ್ತೆ

ಶಿವಮೊಗ್ಗದಲ್ಲಿ 11 ಜನರಿಗೆ ಮಂಗನ ಕಾಯಿಲೆ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ 19 ಜನರ ರಕ್ತದ ಮಾದರಿ ಪರೀಕ್ಷಿಸಲಾಗಿದ್ದು, ಅವರಲ್ಲಿ 11 ಜನರಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೂವರಲ್ಲಿ, ಹೊಸನಗರ ತಾಲೂಕಿನ 8 ಜನರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ.

ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ ಎಂದು ವದಂತಿ ಇದ್ದು, ಇದು ಸುಳ್ಳೆಂದು ತಿಳಿದುಬಂದಿದೆ. ಶಿರಸಿಯಲ್ಲಿ ವ್ಯಾವುದೇ ಸೋಂಕು ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿರುವ ಕಾರಣ, ಆರೋಗ್ಯ ಇಲಾಖೆ ಹೆಚ್ಚು ನಿಗಾ ವಹಿಸಿದೆ. ನವೆಂಬರ್ ನಿಂದ ಮೇ ತಿಂಗಳ ಅವಧಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತೆ. ಹಠಾತ್ ಜ್ವರ ಶರೀರದಲ್ಲಿ ತೀವ್ರ ಸ್ನಾಯುಗಳ ನೋವು, ತಲೆ ನೋವು ಇತ್ಯಾದಿ ರೋಗ ಲಕ್ಷಣಗಳು ಕಂಡು ಬಂದರೆ ಕೂಡಲೆ ಆಸ್ಪತ್ರೆಗೆ ಹೋಗಲು‌ ಆರೋಗ್ಯ ಇಲಾಖೆ ತಿಳಿಸಿದೆ.

Join Whatsapp
Exit mobile version