ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 11 ಲಾ ಕ್ಲರ್ಕ್-ಕಮ್-ರಿಸ್ ರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಕಾನೂನು ಪದವೀಧದರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳು ಕಾನೂನು ಪದವಿಯಲ್ಲಿ ಶೇ.50 ರಷ್ಟು ಅಂಕಗಳು ಪಡೆದಿರಬೇಕು ಹಾಗೂ ಗಣಕಯಂತ್ರದ ತರಬೇತಿ ಹೋಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ ನಲ್ಲಿ ನೊಂದಾಯಿಸಿರಬೇಕು ಮತ್ತು ಅರ್ಜಿದಾರರ ವಯಸ್ಸು ಅರ್ಜಿ ಸಲ್ಲಿಸುವ ಕೊನೆಯ ದಿನದಂದು 30 ವರ್ಷಗಳನ್ನು ಮೀರಿರಬಾರದು.
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 13 2022 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ www.karnatakajudiciary.kar.nic.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮಹಾವಿಲೇಖನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.