ಬಾಗಲಕೋಟೆ: ಹನ್ನೊಂದು ವರ್ಷದ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿ ಬಾವಿಗೆ ಎಸೆದ ಅಮಾನವೀಯ ಘಟನೆ ಬಾಗಲಕೋಟೆಯ ಬೀಳಗಿ ತಾಲೂಕಿನ ಗಿರಿಸಾಗರದಲ್ಲಿ ನಡೆದಿದೆ.
ರೇಖಾ ಸಂಗಪ್ಪ ಯಂಕಂಚಿ (11) ಹತ್ಯೆಯಾದ ಬಾಲಕಿ. ರೇಖಾ ಮಾರ್ಚ್ 15ರಂದು ಶಾಲೆಗೆ ಹೋದವಳು ನಾಪತ್ತೆಯಾಗಿದ್ದಳು. ವಿಷಯ ತಿಳಿದ ಪೋಷಕರು ಗ್ರಾಮಸ್ಥರೊಂದಿಗೆ ಸೇರಿ ಊರೆಲ್ಲಾ ಹುಡುಕಾಡಿದ್ದಾರೆ. ಆದರೆ ಮೃತದೇಹ ಪತ್ತೆಯಾಗಿರಲಿಲ್ಲ.
ಶುಕ್ರವಾರ ಗ್ರಾಮದ ಬಾವಿಯೊಂದರಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇವಹನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆರೋಪಿಗಳ ಪತ್ತೆಗೆ ಬೀಳಗಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.